ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ವೊಂದನ್ನು ನೀಡಿದೆ ಹೌದು ವಾರ್ಷಿಕ ವೇತನ ಬಡ್ತಿಯನ್ನು ಬಿಡುಗಡೆಗೊಳಿಸಿ ಸರ್ಕಾರವು ಆದೇಶವನ್ನು ಮಾಡಿದೆ ಹೌದು ಪರಿವೀಕ್ಷಣಾ ಅವಧಿ ಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿ ಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರ ಡಿಸಿದೆ.
ಪರಿವೀಕ್ಷಣಾ ಅವಧಿಯನ್ನು ತೃತ್ತಿಕರವಾಗಿ ಪೂರೈಸಿದ ಕೂಡಲೇ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡು ವುದಕ್ಕೆ ಸಂಬಂಧಿಸಿದಂತೆ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರು ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುವ ಘೋಷಣೆ ನಂತರದಲ್ಲಿ ವಾರ್ಷಿಕ ವೇತನ ಬಡ್ತಿ ಬಿಡುಗಡೆಗೆ ಒಳಗೊಂಡಂತೆ ಸಕ್ಷಮ ಪ್ರಾಧಿಕಾರಗಳಿಂದ ವೇತನ ನಿಗಧಿ ಆದೇಶಗಳನ್ನು ಹೊರಡಿಸಲು ಸಾಮಾನ್ಯವಾಗಿ ವಿಳಂಬವಾಗುತ್ತಿದೆ.
ಇದರಿಂದ ಅನಗತ್ಯ ತೊಂದರೆಯುಂಟಾಗುತ್ತಿದೆ.ಈ ಸನ್ನಿವೇಶಗಳನ್ನು ಸರಿಪಡಿಸುವ ದೃಷ್ಟಿಯಿಂದ ವೇತನ ನಿಗಧಿ ಆದೇಶಗಳು/ವಾರ್ಷಿಕ ವೇತನ ಬಡ್ತಿ ಬಿಡುಗಡೆ ಗಳಂತಹ ಪ್ರಕರಣಗಳಲ್ಲಿ ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಘೋಷಣಾ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಂಜೂರು ಮಾಡುವ ಕುರಿತು ಸೂಚನೆ ನೀಡುವಂತೆ ಆಯೋಗವು ಶಿಫಾರಸ್ಸು ಮಾಡಿದೆ.
ಈ ಹಿನ್ನೆಲೆಯಲ್ಲಿ ಗ್ರೂಪ್-ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿಯನ್ನು ವಿಸ್ತರಿಸಿದ ಸಂದರ್ಭದಲ್ಲಿ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವೆಂದು ಘೋಷಿಸಿ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗೆ ತಡೆಹಿಡಿಯ ಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆ ಗೊಳಿಸಿ ವೇತನ ನಿಗದಿಪಡಿಸಲು ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ಉಲ್ಲೇಖ ಮಾಡಲಾಗಿದೆ
ಸುದ್ದಿ ಸಂತೆ ಬೆಂಗಳೂರು……