ಧಾರವಾಡ –
ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಡಾ ಈಶ್ವರ ಉಳ್ಳಾಗಡ್ಡಿ – ಬರಮಾಡಿಕೊಂಡು ಸ್ವಾಗತಿಸಿದ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು
ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ ಈಶ್ವರ ಉಳ್ಳಾಗಡ್ಡಿ ಯವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.ಹೌದು ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಡಾ ಈಶ್ವರ ಉಳ್ಳಾಗಡ್ಡಿಯವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ನಂತರ ಅಲ್ಲಿಂದ ಬೀದರ್ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿ ದ್ದರು.
ಮತ್ತೆ ಹತ್ತೆ ದಿನದಲ್ಲೇ ಧಾರವಾಡ ಗೆ ವರ್ಗಾವಣೆಯನ್ನು ಮಾಡಲಾಗಿದೆ.ಧಾರವಾಡ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಬೆನ್ನಲ್ಲೇ ಸಧ್ಯ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.
ಧಾರವಾಡದಲ್ಲಿರುವ ಕಚೇರಿಯಲ್ಲಿ ಸರಳವಾಗಿ ಅಪರ ಆಯುಕ್ತರಾಗಿ ಡಾ ಈಶ್ವರ ಉಳ್ಳಾಗಡ್ಡಿಯವರು ಅಧಿಕಾರವನ್ನು ವಹಿಸಿಕೊಂಡರು.ಅಧಿಕಾರ ವಹಿಸಿ ಕೊಳ್ಳುಲು ಕಚೇರಿಗೆ ಆಗಮಿಸುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ಅಧಿಕಾರಿಗಳು ಸ್ವಾಗತ ಮಾಡಿಕೊಂಡು ಬರಮಾಡಿಕೊಂಡು ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಶುಭವನ್ನು ಹಾರೈಸಿದರು.ಇನ್ನೂ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಚೇರಿಯಲ್ಲಿ ಅಧಿಕಾರಿಗಳೊಂ ದಿಗೆ ಡಾ ಈಶ್ವರ ಉಳ್ಳಾಗಡ್ಡಿಯವರು ಸಭೆಯನ್ನು ಮಾಡಿದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..