ಬೆಂಗಳೂರು –
ಶಿಕ್ಷಕರ ನೇಮಕ, ಶಾಲೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಕೆ.ಮನಮೋಹನ ಅವರಿಗೆ ಎಐಡಿಎಸ್‌ಒ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು.
40 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ನಿಯೋಜಿ ಸಬೇಕು.ರಾಜ್ಯದ 46 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ 59 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 7 ಸಾವಿರ ಏಕೋಪಾಧ್ಯಾಯ ಶಾಲೆಗಳಿವೆ. ಶಾಲೆಯ ಮಕ್ಕಳಿಗೆ ಮೊಟ್ಟೆ, ಬಿಸಿ ಊಟಕ್ಕೆ ತರಕಾರಿ ತರಲು, ಇಲಾಖೆ ಕೆಲಸದ ಮೇಲೆ ಶಿಕ್ಷಕರು ಶಾಲೆಯಿಂದ ಆಚೆ ಹೋದರೆ ಮಕ್ಕಳಿಗೆ ಯಾರು ಗತಿ?’ ಎಂದು ಎಐಡಿಎಸ್‌ಒ ಅಧ್ಯಕ್ಷೆ ಟಿ.ಈ.ಅಶ್ವಿನಿ ಪ್ರಶ್ನಿಸಿದರು.
ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 73 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿಯಿದೆ. ಗುತ್ತಿಗೆ ಆಧಾರದಲ್ಲಿ ನೇಮಕಗೊಳ್ಳುವ ಶಿಕ್ಷಕರ ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಇಂತಹ ಸ್ಥಿತಿಯಲ್ಲಿ ಸಮರ್ಥವಾಗಿ ಬೋಧಿಸಲು ಸಾಧ್ಯವಾಗುವುದಿಲ್ಲ. ಶಿಕ್ಷಣದ ಗುಣಮಟ್ಟ ವರ್ಷದಿಂದ ವರ್ಷಕ್ಕೆ ಕುಸಿಯು ತ್ತಿದ್ದು, ಪಾಲಕರು, ಶಿಕ್ಷಕರು, ಶಿಕ್ಷಣ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ ಎಂದರು.
ಶಾಲೆಗಳಲ್ಲಿ ಸುಸಜ್ಜಿತ ಕೊಠಡಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಪ್ರಯೋಗಾ ಲಯ, ಗ್ರಂಥಾಲಯ ಸಹಿತ ಅಗತ್ಯ ಸೌಲಭ್ಯ ಕಲ್ಪಿಸ ಬೇಕು. ಕಡ್ಡಾಯ ತೇರ್ಗಡೆ ನೀತಿ ಕೈಬಿಟ್ಟು 1ನೇ ತರಗತಿಯಿಂದಲೇ ಪಾಸ್, ಫೇಲ್ ಪದ್ಧತಿ ಜಾರಿ ಗೊಳಿಸಬೇಕು.
ಈಗ ಸಿಬಿಎಸ್‌ಸಿ ಮಾದರಿಯಲ್ಲಿ 80ಕ್ಕೆ ಕೇವಲ 13 ಅಂಕ ಪಡೆದರೆ ಉತ್ತೀರ್ಣಗೊಳಿಸುವ ನಿಯಮಾ ವಳಿಯಿಂದಾಗಿ ಶೈಕ್ಷಣಿಕ ಗುಣಮಟ್ಟ ಪಾತಾಳಕ್ಕೆ ತಲುಪುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..