ಬಳ್ಳಾರಿ –
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿರಿತನದ ಆಧಾರದ ಮೇಲೆ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನೇಮಕಗಳಿಗೆ ತಿದ್ದುಪಡಿ ತರಲು ಆಗ್ರಹಿಸಿ ಸೆಪ್ಟಂಬರ್ 03ರ ರಂದು ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಒಂದು ದಿನದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ ಅವರು ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸೆಪ್ಟೆಂಬರ್ 4, 2024 ರಂದು ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿ ಪ್ರಾಥಮಿಕ ಶಾಲಾ ಶಿಕ್ಷಕರ ಹಿರಿತನ ಆಧಾರದ ಬಡ್ತಿ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಿ, 30 ದಿನಗಳೊಳಗಾಗಿ ವರದಿ ಪಡೆದು ಅನುಷ್ಠಾನಗೊ ಳಿಸುವ ಭರವಸೆ ನೀಡಿದ್ದರು.
ಆದರೆ, ಈ ಭರವಸೆ ಈವರೆಗೂ ಈಡೇರಿಲ್ಲ. ಕಾರಣ ಸೆಪ್ಟಂಬರ್ 3, 2025ರರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.ಅಲ್ಲದೇ, ಪ್ರತಿ ತಾಲೂಕಿನಲ್ಲಿಯೂ ಪ್ರಾಥಮಿಕ ಶಾಲಾ ಶಿಕ್ಷಕರು ಒಂದು ದಿನದ ಸಾಂದರ್ಭಿಕ ರಜೆಯನ್ನು ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ.
ಪ್ರತಿಭಟನೆಯ ಸಂದರ್ಭದಲ್ಲಿ ಆರರಿಂದ ಎಂಟನೇ ತರಗತಿವರೆಗಿನ ತರಗತಿಗಳನ್ನು ಮಾತ್ರ ನಡೆಸಿ, ಉಳಿದ ತರಗತಿಗಳನ್ನು ಬಂದ್ ಮಾಡಲಾಗುತ್ತದೆ ಎಂದರು.
ಕರ್ನಾಟಕ ಸರ್ಕಾರ ನಮ್ಮೊಂದಿಗೆ ಮಾತುಕತೆ ನಡೆಸದೇ ಹೋದಲ್ಲಿ ಸೆಪ್ಟಂಬರ್ 4 ಮತ್ತು 5 ರಂದು ಆಹೋರಾತ್ರ ಧರಣಿಯನ್ನು ನಡೆಸಿ, ಶಿಕ್ಷಕರ ದಿನಾಚರಣೆಯನ್ನು ಫ್ರೀಡಂಪಾರ್ಕ್‍ನಲ್ಲಿ ನಡೆಸಲಾಗುತ್ತದೆ. ಈ ಸಂದರ್ಭ ದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಂಡಪ್ಪನವರ ನಾಗರಾಜ, ಪದಾಧಿಕಾರಿಗಳಾದ ರಾಘವೇಂದ್ರ, ದೇವಣ್ಣ, ಎಚ್. ಬಸವರಾಜ್, ಎನ್. ಶಿವಶಂಕರ್, ಬಸವನಗೌಡ, ಪ್ರಕಾಶ್, ವೇದಾವತಿ ಸೇರಿ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬಳ್ಳಾರಿ…..