ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳ ಸಭೆ ಜನತಾ ಬಜಾರ ನಿರ್ವಹಣೆಗೆ ಒತ್ತು ನೀಡಿ ಭೂ ಸ್ವಾಧೀನ 5.7ಕೋಟಿ ವಿಶೇಷ ಅನುದಾನ ರಸ್ತೆ ಅಗಲೀಕರಣ ಯೋಜನೆ ಅನುಷ್ಠಾನಕ್ಕೆ ಪ್ರಸಾದ ಅಬ್ಬಯ್ಯ ಖಡಕ್ ಸೂಚನೆ
ನ್ಯೂ ಇಂಗ್ಲಿಷ್ ಸ್ಕೂಲ್‌ನಿಂದ ಇಚಿಡಿ ಪಂಪ್ ವರೆಗೆ ರಸ್ತೆ ಅಗಲೀಕರಣಕ್ಕೆ ಶೀಘ್ರ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರು, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಹೇಳಿದರು.
ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ಹಳೇ ಹುಬ್ಬಳ್ಳಿ ಇಂಡಿ ಪಂಪ್ ವೃತ್ತದಿಂದ ಪಿಬಿ ರಸ್ತೆಯ ನ್ಯೂ ಇಂಗ್ಲೀಷ್ ಸ್ಕೂಲ್ ವರೆಗಿನ 1.24 ಕಿ.ಮೀ. ರಸ್ತೆಯನ್ನು ಅಗಲೀಕರಣ ಮಾಡಲಾಗು ವುದು.
ಈ ರಸ್ತೆಯ ಬದಿಯಲ್ಲಿರುವ 261 ಕಟ್ಟಡಗಳನ್ನು ಗುರುತಿಸಲಾಗಿದೆ. ಅದರಲ್ಲಿ 243 ಖಾಸಗಿ ಹಾಗೂ 18 ಪಾಲಿಕೆ ಆಸ್ತಿಗಳಿವೆ. ಈಶ್ವರ, ವೀರಭದ್ರೇಶ್ವರ, ಬನಶಂಕರಿ, ಆಂಜನೇಯ ದೇವಸ್ಥಾನ ಸೇರಿದಂತೆ 6 ದೇವಸ್ಥಾನಗಳು ಮತ್ತು 1 ಮಸೀದಿ ಸಹ ರಸ್ತೆಯ ಪಕ್ಕದಲ್ಲಿ ಬರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ಸಲ್ಲಿಸಿದರು.
ಮಾಹಿತಿ ಆಲಿಸಿದ ಶಾಸಕ ಪ್ರಸಾದ ಅಬ್ಬಯ್ಯ ಅವರು, ಈ ರಸ್ತೆ ಅಗಲೀಕರಣ ಬಗ್ಗೆ ಆ ಭಾಗದ ಜನರೇ ಬೇಡಿಕೆ ಇಟ್ಟಿದ್ದಾರೆ. ಮುಖ್ಯರಸ್ತೆಗೆ ಹೊಂದಿಕೊಂಡಿ ರುವ ಸ್ವತ್ತುಗಳ ಮಾಲೀಕರೇ ಸ್ವತಃ ತೆರವುಗೊಳಿಸುವ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ. ಹಳೆ ಹುಬ್ಬಳ್ಳಿ ಭಾಗದ ಪ್ರಮುಖ ರಸ್ತೆ ಆಗಿರುವುದರಿಂದ ಪ್ರತಿದಿನ ವಾಹನ ಮತ್ತು ಜನ ದಟ್ಟನೆಯಿಂದ ಕೂಡಿರುತ್ತದೆ. ಹೀಗಾಗಿ ಭೂ ಸ್ವಾಧೀüನಕ್ಕೆ ಅವಶ್ಯವಿರುವ ಪ್ರಕ್ರಿಯೆ ಪಾಲಿಕೆ ಅಧಿಕಾರಿಗಳು ಆರಂಭಿಸುವAತೆ ಸೂಚನೆ ನೀಡಿದರು.
ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಯಲ್ಲಿ ನಿರ್ಮಿಸಲಾದ ಜನತಾ ಬಜಾರ ನಿರ್ವಹಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿ ಗಳು ಒತ್ತು ನೀಡಬೇಕು. ಹಂಚಿಕೆ ಆಗುವವರೆಗೂ ಅದು ಪಾಲಿಕೆ ಸ್ವತ್ತಾಗಿದೆ. ಅದರ ನಿರ್ವಹಣೆ ಕೂಡ ಪಾಲಿಕೆ ಜವಾಬ್ದಾರಿಯಾಗಿದೆ. ಜನತಾ ಬಜಾರ್‌ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದಿರುವ ಬಗ್ಗೆ ಸ್ಥಳೀಯರಿಂದ ದೂರು ಬಂದಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ರೂ. 3 ಕೋಟಿ ಅನುದಾನದಲ್ಲಿ ಪೇಡಾರ ಗಲ್ಲಿಯ ಶಾಲೆಯನ್ನು ನಿರ್ಮಾಣ ಮಾಡಲಾಗುವುದು. ಇಲ್ಲಿನ ವಿದ್ಯಾರ್ಥಿಗಳನ್ನು ಬ್ರಾಡ್ ವೇ ಹಾಗೂ ಕಮರಿಪೇಟೆಗೆ ಸ್ಥಳಾಂತರ ಮಾಡಬೇಕು. ಶಾಲೆಯ ಹತ್ತಿರವಿರುವ ಅಂಗಡಿಗಳನ್ನು ತೆರವು ಮಾಡಲು ಪಾಲಿಕೆ ಅಧಿಕಾರಿ ಗಳು ಕ್ರಮ ವಹಿಸಬೇಕಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಲಯ 11 ಕಚೇರಿಯನ್ನು ಹೆಸ್ಕಾಂ ಕಚೇರಿ ಇರುವ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದರು.
ಭೂ ಸ್ವಾಧೀನಕ್ಕೆ ರೂ. 5.7 ಕೋಟಿ
ರಸ್ತೆ ಅಗಲೀಕರಣ ಸಮೀಕ್ಷಾ ವರದಿಯಲ್ಲಿ ತಿಳಿಸಿರುವಂತೆ 243 ಖಾಸಗಿ ಸ್ವತ್ತುಗಳು ಸೇರಿದಂತೆ ಭೂಸ್ವಾಧೀನಕ್ಕೆ ಅವಶ್ಯವಿರುವ ರೂ. 5.7 ಕೋಟಿ ಅನುದಾನವನ್ನು ರಾಜ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ ಭರಿಸಲಾಗುವುದು. ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಮುಖ್ಯಮಂತ್ರಿ ಗಳೊಂದಿಗ ಚರ್ಚಿಸಿ ವಿಶೇಷ ಅನುದಾನ ತರಲಾಗುತ್ತದೆ.
ಹೀಗಾಗಿ ಅಧಿಕಾರಿಗಳು ಪರಸ್ಪರ ಸಮನ್ವಯ, ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಶೀಘ್ರವೇ ರಸ್ತೆ ಅಗಲೀಕರಣ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಮಾತನಾಡಿ, ರಸ್ತೆ ಅಗಲೀಕರಣ ಕಾಮಗಾರಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳನ್ನು ಇ ಸ್ವತ್ತು ಆಗಿವೆ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಆಸ್ತಿಗಳಿಗೆ ಅನುಗುಣವಾಗಿ ಪರಿಹಾರವನ್ನು ಒದಗಿಸಲಾಗುತ್ತದೆ. ಯಾವುದೇ ರೀತಿಯಲ್ಲಿ ಕಾಲ ವಿಳಂಬ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ ಘಾಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪಾಲಿಕೆಯ ಸಹಾಯಕ ಆಯುಕ್ತರಾದ ವಿಜಯಕುಮಾರ್, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಮಹೇಶ ಗಸ್ತೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..