ಬೆಂಗಳೂರು –
ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ ಅ.1ರಿಂದ `ಆರೋಗ್ಯ ಸಂಜೀವಿನಿ’ ಯೋಜನೆ ಜಾರಿಗೆ ಸರ್ಕಾರ ಆದೇಶ ಹೌದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಯನ್ನು ಅಕ್ಟೋಬರ್ 01, 2025 ರಿಂದ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸುವ ಸಂಬಂಧ ಮೇಲೆ ಕ್ರ.ಸಂ.(1) ರಿಂದ (6) ರಲ್ಲಿ ಓದಲಾದ ಸರ್ಕಾರದ ಆದೇಶ: ಸುತ್ತೋಲೆಗಳಲ್ಲಿ ಕೆಲವು ಕಾರ್ಯ ನೀತಿ ಸೂಚನೆಗಳನ್ನು ನೀಡಲಾಗಿದೆ.
ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ, ಮಾಸಿಕ ವಂತಿಕೆ ಮತ್ತು ಯೋಜನೆಗೆ ಒಳಪಡಲು/ ಒಳಪಡದೇ ಇರಲು, ಆಯ್ಕೆ ವ್ಯಕ್ತಪಡಿಸುವುದು ಮುಂತಾದ ಅಂಶಗಳ ಕುರಿತು ಮೇಲೆ ಓದಲಾದ (6) ರ ದಿನಾಂಕ: 19.04.2025 ರ ಸುತ್ತೋಲೆಯಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ.

ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸುವ ಸರ್ಕಾರಿ ನೌಕರರು ಮಾಸಿಕ ವಂತಿಕೆಯನ್ನು ಯಾವ ಲೆಕ್ಕ ಶೀರ್ಷಿಕೆಯಡಿ ಪಾವತಿಸಬೇಕು ಹಾಗೂ ಇತರೆ ವಿಧಿ-ವಿಧಾನಗಳ ಬಗ್ಗೆ ಮಾರ್ಗಸೂಚಿಗಳನ್ನು (SOP) ನೀಡಲಾಗುವುದೆಂದು ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಸದರಿ ಯೋಜನೆಗೆ ಸಂಬಂಧಿಸಿ ದಂತೆ ಸರ್ಕಾರದಿಂದ ಮತ್ತಷ್ಟು ಪರಿಷ್ಕೃತ ಸೂಚನೆ ಗಳನ್ನು ನೀಡಿ ಅಕ್ಟೋಬರ್ 01, 2025 ರಿಂದ ಜಾರಿಗೆ ತರುವುದು ಅವಶ್ಯವೆಂದು ಪರಿಗಣಿಸಿ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆ ಯಲ್ಲಿ ಪರಿಶೀಲಿಸಿ, ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು (KASS) ಅಕ್ಟೋಬರ್ 01, 2025 ರಿಂದ ಜಾರಿಗೆ ಬರುವಂತೆ ಆದೇಶಿಸಿದೆ.
ಮಾಸಿಕವಂತಿಕೆಯನ್ನು ಪಾವತಿಸುವ ವಿಧಾನ: ಯೋಜನೆಯಡಿ ಸರ್ಕಾರಿ ನೌಕರರ ವೇತನದಿಂದ ಕಡಿತಗೊಳಿಸಲ್ಪಟ್ಟ ವಂತಿಕೆಯನ್ನು ಎಲ್ಲಾ ಡಿಡಿಓಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಈ ಉದ್ದೇಶಕ್ಕಾಗಿಯೇ ತೆರೆಯಲಾದ ಬ್ಯಾಂಕ್ ಖಾತೆಗೆ ಖಜಾನೆ-2 ರಲ್ಲಿ ಸೃಜಿಸಲಾಗುವ ಸ್ವೀಕೃತಿದಾರರ ಐಡಿ (ID) ಗೆ ಜಮಾ ಮಾಡತಕ್ಕದ್ದು. (ಬ್ಯಾಂಕ್ ಖಾತೆ ವಿವರಗಳನ್ನು ಡಿಡಿಓಗಳಿಗೆ HRMS ಮುಖಾಂತರ ತಿಳಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..