ಬೆಂಗಳೂರು –
ಹಿರಿಯ ಸಾಹಿತಿ SL ಭೈರಪ್ಪ ಇನ್ನೂ ನೆನಪು ಮಾತ್ರ – ಕನ್ನಡದ ಖ್ಯಾತ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ನಿಧನಕ್ಕೆ ಕಂಬನಿ ಮಿಡಿದ ನಾಡಿನ ಶಿಕ್ಷಕ ಬಂಧುಗಳು – ಮೌನವಾಯಿತು ಸಾಹಿತ್ಯ ಲೋಕ…..
ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ನಿಧನ ರಾಗಿದ್ದಾರೆ.94 ವಯಸ್ಸಿನ ಎಸ್ ಎಲ್ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿತ್ತು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ‘ವಂಶವೃಕ್ಷ’,’ದಾಟು’ ‘ಪರ್ವ’ ದಂತಹ ಕೃತಿಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದರು.
ಇನ್ನೂ ಯುವ ಓದುಗರನ್ನೂ ಸೆಳೆದಿದ್ದರು.ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಕಳೆದೊಂದು ವರ್ಷದಿಂದ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಇಂದು ಕೊನೆ ಯುಸಿರೆಳೆದಿದ್ದಾರೆ
ಕನ್ನಡ ಸಾಹಿತ್ಯದ ಸೇವೆಯಲ್ಲಿ ಸದಾ ಮುಂದಿರುತ್ತಿದ್ದ ಭೈರಪ್ಪ ಅವರ ಬರಹಗಳನ್ನು ಓದುವವರ ಸಾಲಿನಲ್ಲಿ ಹೊಸ ಯುಗದ ನವ ಯುವಕರೇ ಹೆಚ್ಚಾಗಿದ್ದರು. ಅವರ ಪ್ರಸಿದ್ಧ ಕೃತಿಗಳನ್ನು ಈಗಲೂ ಹಲವು ಯುವ ಜನರಿಗೆ ಮೊದಲ ಓದಾಗಿ ಓದುವಂತೆ ಪ್ರೇರಣೆ ನೀಡುವವರ ಸಂಖ್ಯೆಗೇನೂ ಕಡಿಮೆಯಾಗಿಲ್ಲ. ಇದೀಗ ಕನ್ನಡ ಸಾಹಿತ್ಯ ಲೋಕದ ಬರವಣಿಗೆಯಲ್ಲಿ ಶಾಶ್ವರ ಪೂರ್ಣ ವಿರಾಮ ಹಾಕಿದ್ದಾರೆ.
ಕನ್ನಡದ ಪ್ರಮುಖ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿಂತಕರಾಗಿದ್ದರು. ಅವರ ಕಾದಂಬರಿಗಳು ಭಾರತೀಯ ಭಾಷೆಗಳಿಗೆ ಅನುವಾದಗೊಂಡಿದ್ದು, ವ್ಯಾಪಕ ಜನಪ್ರಿ ಯತೆ ಗಳಿಸಿವೆ. ಅವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮ. ಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿ ಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಸ್ಥಾಪಿಸಿದ್ದು
ನಿಧನಕ್ಕೆ ನಾಡಿನ ಶಿಕ್ಷಕ ಬಂಧುಗಳು ಸಂತಾಪವನ್ನು ಸೂಚಿಸಿದ್ದಾರೆ.ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನಡೆಯಲಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..