ಬೆಂಗಳೂರು –
ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೇ, ಅಧಿಕಾರಿಗಳ ಕರೆ ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಯಲ್ಲಿ ಒಟ್ಟು 8 ಸಹಶಿಕ್ಷಕರನ್ನು ಅಮಾನತುಗೊಳಿಸ ಲಾಗಿದೆ’
ಡಿಡಿಪಿಐ ಎಸ್.ಟಿ.ಜವರೇಗೌಡ ತಿಳಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್‌ಕುಮಾರ್ ಆದೇಶದ ಮೇರೆಗೆ ಕ್ರಮ ವಹಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.ಕೊಪ್ಪಳ ದಲ್ಲಿ ಸಮೀಕ್ಷೆಗೆ ಬರದೇ ಕರ್ತವ್ಯಲೋಪ ಎಸಗಿದ್ದ ತಾಲ್ಲೂಕಿನ ಜೂಲಕುಂಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ತಳವಾರ ಅವರನ್ನು ಅಮಾನತು ಪಡಿಸಲಾಗಿದೆ.ರಾಮಪ್ಪ ತಳವಾರ ಸಮೀಕ್ಷೆ ಕೆಲಸ ಆರಂಭಿಸಿಲ್ಲ ಎಂಬುದು ಸೇರಿ ಕುಷ್ಟಗಿ ಸಿಆರ್‌ಪಿ ವರದಿ ಆಧರಿಸಿ ಕ್ರಮ ಜರುಗಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಸಮೀಕ್ಷೆಗೆ ಗೈರು: 57 ಸಿಬ್ಬಂದಿಗೆ ನೋಟಿಸ್
ಲಿಂಗಸುಗೂರು (ರಾಯಚೂರು ಜಿಲ್ಲೆ) ಸಮೀಕ್ಷೆಗೆ ನಿರಂತರವಾಗಿ ಗೈರಾದ 57 ಸಿಬ್ಬಂದಿಗೆ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷ, ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
‘ತಾಲ್ಲೂಕಿನಲ್ಲಿ ಸಮೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಪೈಕಿ 57 ಮಂದಿ ಸತತವಾಗಿ ಗೈರಾಗಿದ್ದಾರೆ. ಹಾಜರಾ ಗಲು ಸೂಚಿಸಿದರೂ ಬಂದಿಲ್ಲ. ನಿರ್ಲಕ್ಷ್ಯದಿಂದಾಗಿ ಸಮೀಕ್ಷಾ ಕಾರ್ಯ ಕುಂಠಿತವಾಗಿದೆ. 24 ಗಂಟೆಯೊಳಗೆ ಸಮಜಾಯಿಷಿ ನೀಡಿ’ ಎಂದು ಸೂಚಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..