ಬೆಂಗಳೂರು –
ಸಾಲು ಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಯಲ್ಲಿ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ ಹೌದು ನಾಳೆ ರಾಜ್ಯಾಧ್ಯಂತ ಸರ್ಕಾರಿ ರಜೆ ಇರುವುದಿಲ್ಲ. ಕೇವಲ ಸರ್ಕಾರಿ ಗೌರವಗಳೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಗೆ ಆದೇಶಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.
ನಾಳೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಾಲು ಮರದ ತಿಮ್ಮಕ್ಕ ಅವರ ನಿಧನದ ಕಾರಣದಿಂದಾಗಿ ಸರ್ಕಾರಿ ರಜೆ ಘೋಷಿಸಲಾಗಿದೆ ಎನ್ನುವಂತ ಆದೇಶ ಪತ್ರವೊಂದು ವೈರಲ್ ಆಗಿತ್ತು.ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರವು ಆದೇಶಿಸಿದೆ. ಆದರೇ ನಾಳೆ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಘೋಷಿಸಿಲ್ಲ ಎಂಬುದಾಗಿ ಸರ್ಕಾರ ತಿಳಿಸಿದೆ.ಇದರೊಂದಿಗೆ ರಜೆಯ ಕುರಿತಾದ ಎಲ್ಲಾ ಗೊಂದಲಗಳಿಗೆ ತೆರೆ ಏಳೆಯಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..





















