ಧಾರವಾಡ –
ಇತ್ತೀಚೆಗಷ್ಟೆ ಮುಕ್ತಾಯವಾದ ಗ್ರಾಮ ಪಂಚಾಯತಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಈಗ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿ ಮಾಡುವ ಕುರಿತು ಜಿಲ್ಲಾಧಿಕಾರಿ ದಿನಾಂಕ ಘೋಷಣೆ ಮಾಡಿದ್ದಾರೆ.

ಜಿಲ್ಲೆಯ ಏಳು ತಾಲ್ಲೂಕಿನ ಒಟ್ಟು 144 ಗ್ರಾಮ ಪಂಚಾಯತಿಗಳ ಮೊದಲನೆಯ ಅವಧಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಕುರಿತು ಚರ್ಚಿಸಲು ದಿನಾಂಕ ನಿಗದಿ ಮಾಡಿ ಜಿಲ್ಲಾಧಿಕಾರಿ ದಿನಾಂಕ ಘೋಷಣೆ ಮಾಡಿದ್ದಾರೆ.ಇನ್ನೂ ಈ ಒಂದು ಸಭೆಯಲ್ಲಿ ಚರ್ಚೆ ನಂತರ ಮೀಸಲಾತಿ ಘೋಷಣೆಯಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಯಾರು ಯಾರು ಅಧಿಕಾರ ಸ್ವೀಕರಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕು.