ಧಾರವಾಡ –
ಜ.16 ರಂದು ಕುಂದಗೋಳ ಹಾಗೂ ಜ.19 ರಂದು ನವಲಗುಂದದಲ್ಲಿ ಲೋಕಾಯುಕ್ತ ಪೊಲೀಸ್‍ರಿಂದ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಆರ್. ಬಿಸನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತದ ಧಾರವಾಡ ವಿಭಾಗದ ಪೊಲೀಸ್ ಅಧೀಕ್ಷಕರ ಕಚೇರಿಯ ಅಧಿಕಾರಿಗಳು ಜನವರಿ 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುಂದಗೋಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಜ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲು ಸಭೆ ನಡೆಸಲಿದ್ದಾರೆ ಎಂದರು.

ಇನ್ನೂ ಈ ಸಭೆಗಳಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳು ಅಧಿಕಾರಿಗಳು ಹಾಜರಿರುತ್ತಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು.ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಆರ್. ಬಿಸನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.