ಆರು ಜನ ಸಚಿವರಿಗೆ ಬಿಗ್‌ ರಿಲೀಫ್ – ಮಾರ್ಚ್ 30 ರವರೆಗೆ ತಡೆಯಾಜ್ಞೆ

Suddi Sante Desk

ಬೆಂಗಳೂರು –

ತಮ್ಮ ವಿರುದ್ಧದ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ ನ್ಯಾಯಾಲಯ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾನ್ಯ ಮಾಡಿದೆ. ಅಲ್ಲದೇ ಮಾರ್ಚ್ 30ರವರೆಗೆ ಮಾನಹಾರಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆಯ ನಂತ್ರ, ಇನ್ನೂ ಹಲವು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎಂದೇ ಹೇಳಲಾಗುತ್ತಿತ್ತು. ಇದೇ ಸಂದರ್ಭದಲ್ಲಿ ತಮ್ಮ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂಬುದಾಗಿ ಆರೋಪಿಸಿದಂತ ಆರು ಸಚಿವರು, ತಮ್ಮ ವಿರುದ್ಧದ ಯಾವುದೇ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ಕುರಿತಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನ ಸಿಸಿಹೆಚ್-20 ರ ನ್ಯಾಯಾಧೀಶರಾದ ಬಿ.ಎಸ್.ವಿಜಯಕುಮಾರ್ ಅವರ ನ್ಯಾಯಪೀಠವು, ಅರ್ಜಿಯನ್ನು ಮಾನ್ಯಮಾಡಿ, ರಾಜ್ಯದ ಎಲ್ಲಾ ಮಾಧ್ಯಮಗಳಿಗೆ 6 ಸಚಿವರ ಬಗ್ಗೆ ಯಾವುದೇ ಮಾನಹಾರಿ ವರದಿಯನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ, ತುರ್ತು ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಅರ್ಜಿಯ ವಿಚಾರಣೆ ಮಾರ್ಚ್ 30ಕ್ಕೆ ಮುಂದೂಡಿಕೆ ಮಾಡಿದ್ದಾರೆ.

ಅಂದಹಾಗೇ ಸಚಿವ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಹೆಚ್ ಟಿ ಸೋಮಶೇಖರ್, ನಾರಾಯಣಗೌಡ, ಡಾ.ಕೆ.ಸುಧಾಕರ್ ಹಾಗೂ ಭೈರತಿ ಬಸವರಾಜ್ ತಮ್ಮ ವಿರುದ್ಧದ ಸುದ್ದಿಗಳ ಪ್ರಸಾರವನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿ ತಡೆಯಾಜ್ಞೆ ನೀಡಿದೆ.ಇದರೊಂದಿಗೆ ಕೆಲ ದಿನಗಳ ವರೆಗೆ ಆರು ಸಚಿವರಿಗೆ ಸಮಾಧಾನ ಸಿಕ್ಕಂತಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.