ಚಿಕ್ಕಮಗಳೂರು –
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ಸಚಿವ ಕೆ.ಎಸ್ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಏನಾದರೂ ತಿಂದು ಸಿದ್ದರಾಮಯ್ಯ ಸಾಯಲಿ ನಮಗೂ ಅದಕ್ಕೂ ಸಂಬಂಧವಿಲ್ಲ ಗೋಮಾಂಸ ತಿಂತೀನಿ, ನಾಟಿ ಕೋಳಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳ್ತುತ್ತಾ ಅವರು ಏನಾದ್ರು ತಿಂದು ಸಾಯಲಿ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್ ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿರುವ ಜನಸೇವಕ ಸಮಾವೇಶದಲ್ಲಿ ಭಾಗಿಯಾಗಿ ಕೆ.ಎಸ್ ಈಶ್ವರಪ್ಪ ಅವರು ಮಾತನಾಡಿದರು.