ಹುಬ್ಬಳ್ಳಿ –
ಹಿರಿಯ ಪತ್ರಕರ್ತ ಹನುಮಂತ ಹೂಗಾರ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಹಿರಿಯ ಪತ್ರಕರ್ತರಾದ ಹನುಮಂತ ಹೂಗಾರ ಮೃತರಾಗಿದ್ದಾರೆ.

ಹುಬ್ಬಳ್ಳಿಯ ನಿವಾಸಿಯಾಗಿರುವ ಇವರು ಇಂದು ನಿಧನರಾಗಿದ್ದಾರೆ. ಕಳೆದ 30 ವರುಷಗಳಿಂದ ವಿಶ್ವವಾಣಿ,ಪ್ರಪಂಚ,ವಿಶಾಲ ಕರ್ನಾಟಕ,ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಹಿರಿಯ ವರದಿಗಾರರಾಗಿ ಕೆಲಸ ಮಾಡಿದ್ದರು. 2015 ರಲ್ಲಿ ಇವರ ಸೇವೆಯನ್ನು ಪರಿಗಣಿಸಿ ಮಾಧ್ಯಮ ಕ್ಷೇತ್ರದಲ್ಲಿ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗುರುತಿಸಲಾಗಿತ್ತು. ಕಳೆದ ತಿಂಗಳವಷ್ಟೇ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ನಾಡೋಜ ಪಾಟೀಲ ಪುಟ್ಟಪ್ಪನವರೊಂದಿಗೆ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತ ಹನುಮಂತ ಹೂಗಾರ ಇಬ್ಬರು ಪುತ್ರರನ್ನು ಒರ್ವ ಪುತ್ರಿಯನ್ನು ಅಗಲಿದ್ದಾರೆ.ಇನ್ನೂ ಒರ್ವ ಪುತ್ರ ಸುಭಾಸ ಹೂಗಾರ ಅವರು ಕೂಡಾ ಸಧ್ಯ ಹಿರಿಯ ಪತ್ರಕರ್ತರಾಗಿದ್ದಾರೆ. ಮೃತರ ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲಿ ಮಾಡಲಾಗುತ್ತದೆ.

ಇನ್ನೂ ಹಿರಿಯ ಪತ್ರಕರ್ತರ ನಿಧನಕ್ಕೆ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರು ಹಾಗೇ ಹುಬ್ಬಳ್ಳಿ ಧಾರವಾಡ ಎಲ್ಲಾ ಪತ್ರಕರ್ತ ಮಿತ್ರರು ಪೊಟೊ ಜರ್ನಲಿಸ್ಟ್ ಸಹೋದ್ಯೋಗಿ ಮಿತ್ರರು, ವಿಡಿಯೋ ಜರ್ನಲಿಸ್ಟ್ ಮಿತ್ರರು ಎಲ್ಲರೂ ಅಗಲಿದ ಹಿರಿಯ ಪತ್ರಕರ್ತರಿಗೆ ಸಂತಾಪ ಸೂಚಿಸಿದ್ದಾರೆ.