ಧಾರವಾಡ –
ಧಾರವಾಡದ ಇಟಿಗಟ್ಟಿ ಬಳಿ ನಡೆದ ಅಪಘಾತದ ಬೆನ್ನಲ್ಲೇ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದೆ. ಹೌದು ನಗರದಿಂದ ಹಳಿಯಾಳದತ್ತ ಹೊರಟಿದ್ದ ಬೈಕಿಗೆ ಎದುರಿನಿಂದ ಬಂದ ಓಮಿನಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ ಸವಾರರು ಸಾವನ್ನಪ್ಪಿದ್ದಾರೆ.

ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಮಾವಿನಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.ಸಚಿನ ಎಂಬುವವರಿಗೆ ಸೇರಿದ ಬೈಕಿನಲ್ಲಿದ್ದ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಅಜಯ ಹಾಗೂ ಸುರೇಶ ಹೋಗುತ್ತಿದ್ದರು

ಈ ಒಂದು ಸಮಯದಲ್ಲಿ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಓಮಿನಿ ವ್ಯಾನ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದು ಓಮಿನಿ ವ್ಯಾನ್ ಚಾಲಕ ಶಿವಾನಂದ ಗದಿಗೆಪ್ಪ ಹಡಪದ ಎಂಬಾತನಿಗೂ ಗಾಯಗಳಾಗಿವೆ.

ಬೈಕಿನಲ್ಲಿದ್ದ ಓರ್ವ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವಕನನ್ನು ಮೊದಲು ಹಳಿಯಾಳದಲ್ಲಿ ಚಿಕಿತ್ಸೆ ನೀಡಿ, ನಂತರ ಕಿಮ್ಸಗೆ ರವಾನೆ ಮಾಡಿದ್ದಾರೆ. ಘಟನೆಯ ಬಗ್ಗೆ ದೂರು ದಾಖಲು ಮಾಡಿಕೊಂಡಿರುವ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
