ಒಂದು ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ರಾಜೀನಾಮೆ…..

Suddi Sante Desk

ಮಸ್ಕಿ –

ಕಾಂಗ್ರೆಸ್‌ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ತಿಂಗಳಲ್ಲಿ ಆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಹೇಳಿದರು. ಮಸ್ಕಿ ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್‌ ಕಾರ್ಯಕರ್ತರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ.

ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿ ಪಂಚಜನ್ಯ ಕಹಳೆ ಮೊಳಗಿಸಿದ್ದು, ಉಪಕದನದಲ್ಲಿ ಸಿಎಂ ಯಡಿಯೂರಪ್ಪ ಅವರು ಕೃಷ್ಣರಂತೆ ಸಾರಥಿ ಯಾಗಿದ್ದಾರೆ, ಬಿ.ವೈ.ವಿಜಯೇಂದ್ರ ಅವರು ಅರ್ಜುನರಾಗಿದ್ದಾರೆ.

ಶ್ರೀರಾಮುಲು ಭೀಮರಾಗಿದ್ದು, ಎನ್‌.ರವಿಕುಮಾರ ಅವರು ಸಹದೇವರಾಗಿದ್ದಾರೆ. ಈ ಕುರುಕ್ಷೇತ್ರದಲ್ಲಿ ಪಾಂಡವರಿಗೆ ಗೆಲವು ಖಚಿತವಾಗಿ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇವೆಲ್ಲದರ ನಡುವೆ ಇತ್ತ ಸಿದ್ದರಾಮಯ್ಯ ಈ ಒಂದು ವಿಚಾರ ಕುರಿತು ಏನು ಹೇಳ್ತಾರೆ ಎಂಬುದನ್ನು ಕಾದು ನೋಡಬೇಕು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.