ಕೊಪ್ಪಳ –
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತಂತೆ ಪಾದಯಾತ್ರೆ ದಾವಣಗೇರಿ ತಲುಪುವ ವೇಳೆಗೆ ಸರ್ಕಾರ ಸರಿಯಾದ ನಿರ್ಧಾರವನ್ನು ಕೈಗೊಳ್ಳಬೇಕು. ಇಲ್ಲವಾದರೆ ಉಗ್ರವಾದ ಹೋರಾಟವನ್ನು ಮಾಡಲಾಗುತ್ತದೆ ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಕೊಪ್ಪಳದಲ್ಲಿ ಮಾತನಾಡಿದ ಅವರು 1994 ರಿಂದಲೂ ಪಂಚಮಸಾಲಿ ಸಮುದಾಯ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಹೋರಾಟವನ್ನು ಶುರು ಮಾಡಿದ್ವಿ ಲಿಂಗಾಯತರಲ್ಲೇ ಹಿಂದುಳಿದ ಪಂಚಮಸಾಲಿ ಸಮುದಾಯಕ್ಕೆ ಸಂವಿಧಾನಿಕ ಹಕ್ಕು ಬೇಕಿದೆ.
ಕುರುಬ ಮತ್ತು ವಾಲ್ಮೀಕಿ ಸಮುದಾಯದ ಸದ್ಯ ಮೀಸಲಾತಿಗೆ ದೊಡ್ಡ ಹೋರಾಟ ಆರಂಭಿಸಿವೆ ಎಂದರು. ಇದೇ ವೇಳೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಹೋರಾಟ ಆರಂಭಿಸಿದ್ದು
ಸಮಯೋಚಿತ ಪಂಚಮಸಾಲಿ ಸಮುದಾಯ ಇದೇ ಮೊದಲ ಬಾರಿಗೆ ತಮಗಾಗಿ ಹೋರಾಟ ಮಾಡ್ತಿದೆ ಸಿಎಂ ಯಡಿಯೂರಪ್ಪ ನಿಜವಾಗಿಯೂ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದರೆ ಮೀಸಲಾತಿ ನೀಡಬೇಕೆಂದು ಒತ್ತಾಯ ಮಾಡಿದರು.
ಕರ್ನಾಟಕದ 3 ಪ್ರಭಲ ಸಮುದಾಯಕ್ಕೆ ಮೀಸಲಾತಿ ನೀಡಬೇಕಿದೆ ಎಂದರು. ಇನ್ನೂ ನಮ್ಮ ಈ ಒಂದು ಪಾದಯಾತ್ರೆ ದಾವಣಗೆರೆ ತಲುಪುವ ಒಳಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು
ಇಲ್ಲವಾದರೆ ಹೋರಾಟದ ತೀವ್ರತೆ ಬದಲಾಗಲಿದೆ ನಮ್ಮ ಘೋಷ ವಾಕ್ಯಗಳೂ ಬದಲಾಗಲುವೆ ಎಂದು ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ ನೀಡಿದರು.