ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಮೀನು ಮಾಲೀಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಪೋಟ ಸಂಭವಿಸಿದ ಕಲ್ಲು ಗಣಿಗಾರಿಕೆ ಜಮೀನು ಮಾಲೀಕ ಅವಿನಾಶ್ ಕುಲಕರ್ಣಿ, ಗುತ್ತಿಗೆದಾರ ಸುಧಾಕರ್ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆ, ಅಕ್ರಮ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ಜೆಡಿಎಸ್ ಮುಖಂಡ ನರಸಿಂಹ ಎಂಬುವರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ರಾತ್ರಿ 10.25 ರ ಸುಮಾರಿಗೆ ಹುಣಸೋಡ ಕಲ್ಲು ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟಗೊಂಡ ಪರಿಣಾಮ ಹತ್ತಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲಾಡಳಿತ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ತನಿಖೆ ನಡೆಯುತ್ತಿದೆ