ಹುಬ್ಬಳ್ಳಿ –
ಹುಬ್ಬಳ್ಳಿಯಲ್ಲಿ ಪಿಡಿಓಗಳ ರಾಜ್ಯ ಮಟ್ಟದ ಸಮಾವೇಶ ನಡೆಯಿತು.ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದಿಂದ ಈ ಒಂದು ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಗೋಕುಲ ಗಾರ್ಡನ್ ನಲ್ಲಿ ಆರಂಭವಾದ ರಾಜ್ಯಮಟ್ಟದ ಸಮಾವೇಶವನ್ನು ಸಚಿವ ಕೆ ಎಸ್ ಈಶ್ವರಪ್ಪ ಸೇರಿದಂತೆ ಹಲವರು ಚಾಲನೆ ನೀಡಿದರು.
ಗ್ರಾಮ ಪಂಚಾಯತ್ ಸಬಲೀಕರಣದಲ್ಲಿ ಪಿಡಿಓಗಳ ಪಾತ್ರ ಹಾಗೂ ಸವಾಲುಗಳ ಕುರಿತು ಈ ಒಂದು ಸಮಾವೇಶವನ್ನು ಆಯೋಜಿಸಲಾಗಿತ್ತು.
ಪಿಡಿಓ ಹುದ್ದೆ ಮೇಲ್ದರ್ಜೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾವೇಶದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಶಾಸಕಿ ಕುಸುಮಾವತಿ ಶಿವಳ್ಳಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿವಿಯ ಕುಲಪತಿ ಪ್ರೊ.ವಿಷ್ಣುಕಾಂತ್ ಚಟಪಲ್ಲಿ, ಸಂಘದ ರಾಜ್ಯಾಧ್ಯಕ್ಷ ಬೋರಯ್ಯ ಎಚ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಮಾವೇಶದಲ್ಲಿ ಸಂಘದ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದವು.ಇನ್ನೂ ಈ ಒಂದು ದೊಡ್ಡ ಮಟ್ಟದ ರಾಜ್ಯಮಟ್ಟದ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಪಿಡಿಓಗಳು ಭಾಗಿಯಾಗಿದ್ದು ಕಂಡು ಬಂದಿತು.
ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾಲ್ಗೊಂಡು ಮಾತನಾಡಿ ಗ್ರಾಮೀಣಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕರ ಬಡ್ತಿ ಬೇಡಿಕೆಯನ್ನ ನಾವು ಈಡೇರಿಸಲು ಬದ್ಧವಾಗಿದ್ದೆವೆ.
ಪಿಡಿಓಗಳ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸಹಾನುಭೂತಿ ನೀಡಲಿದೆ. ಹಳ್ಳಿಗಳನ್ನು ಶಹರಗಳ ಮಾದರಿಯಲ್ಲಿ ಮೂಲಭೂತ ಸೌಲಭ್ಯಗಳನ್ನ ಕಲ್ಪಿಸಬೇಕು.ರಾಜ್ಯದಲ್ಲಿ ಪಿಡಿಓಗಳ ಮೇಲೆ ಮಾನಸಿಕ ಹಾಗೂ ದೈಹಿಕ ಹಲ್ಲೆಗಳು ನಡೆಯುತ್ತಲೇ ಇವೆ ಆದರೆ ನಿಮ್ಮ ರಕ್ಷಣೆಗೆ ಸರ್ಕಾರ ಮಹತ್ವ ನೀಡಲಿದೆ ಎಂದರು.
ಈ ಬಗ್ಗೆ ನಾನು ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ ಎನ್ನುತ್ತಾ ಸಮಾವೇಶದಲ್ಲಿ ಸಚಿವರು ಪಿಡಿಓಗಳಿಗೆ ಭರವಸೆ ನೀಡಿದರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.