ಬಾಲಕಿಯ ಅತ್ಯಾಚಾರಕ್ಕೆ ಖಂಡನೆ ಪ್ರತಿಭಟನೆ – ಆರೋಪಿಗಳ ಬಂಧನಕ್ಕೆ ಒತ್ತಾಯ…..

Suddi Sante Desk

ನರಗುಂದ –

ಮದು ಹುಲಿಸ್ಯಾರ‌ ನಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಗೆ ಖಂಡಿಸಿ ಹಾಗೂ ಶೀಘ್ರ ವಾಗಿ ಅಪರಾಧಿಗಳನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ವಿಧಿಸ ಬೇಕೆಂದು ಒತ್ತಾಯಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ವಿದ್ಯಾರ್ಥಿ ಘಟಕದ NSUI, ಹಾಗೂ ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ನರಗುಂದ ನಗರದಲ್ಲಿ ಪುರಸಭೆಯಿಂದ ಶಿವಾಜಿ ಸರ್ಕಲ್ ವರೆಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಶಾಲಾ ಕಾಲೇಜು ವಿದ್ಯಾರ್ಥಿಗಳು ಬೃಹತ್ ಪ್ರಮಾಣ ದಲ್ಲಿ ಪ್ರತಿಭಟನೆ ಮಾಡಲಾಯಿತು.

ಇದೇ ವೇಳೆ ತಹಶೀಲ್ದಾರ್ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಯನ್ನು ಸಲ್ಲಿಸಿದರು. ಇನ್ನೂ ಈ ಒಂದು ಪ್ರತಿಭಟನೆಯಲ್ಲಿ ಎಲ್ಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಭಾಗವಹಿಸಿದ್ದು ಕಂಡು ಬಂದಿತು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.