SSLC ಪರೀಕ್ಷೆ ಮುಂದೂಡಿಕೆ – ಅನಿರ್ಧಿಷ್ಟಾವಧಿಯವರೆಗೆ ಮುಂದೂಡಿಕೆ – ಸಚಿವ ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆ…..

Suddi Sante Desk

ಬೆಂಗಳೂರು –

ಸಧ್ಯ ಮತ್ತೆ SSLC ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.ದಿನದಿಂದ ದಿನಕ್ಕೆ ರಾಜ್ಯದಲ್ಲಿ ಮಹಾಮಾರಿ ಕರೋನ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜೂನ್ 21 ರಿಂದ ಆರಂಭವಾಗ ಬೇಕಾಗಿದ್ದ SSLC ಪರೀಕ್ಷೆ ಯನ್ನು ಮುಂದೂಡಿಕೆ ಮಾಡಲಾಗಿದೆ.

ಕೋವಿಡ್ ಹಿನ್ನಲೆಯಲ್ಲಿ ಜೂನ್ 21 ರಿಂದ ಪ್ರಾರಂ ಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗ ಳನ್ನು ಮುಂದೂಡಿಕೆ ಮಾಡಿ ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದಾಗಿ ವಿದ್ಯಾರ್ಥಿ-ಪೋಷಕರ ಆತಂಕಗಳನ್ನು ಗಮನದಲ್ಲಿ ರಿಸಿ ಈ ಒಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.