ಕೋವಿಡ್ ಹೆಚ್ಚಳ ಮತ್ತಷ್ಟು ಕಠಿಣ ರೂಲ್ಸ್ ಗಳನ್ನು ಜಾರಿಗೊಳಿಸಿದ ರಾಜ್ಯ ಸರ್ಕಾರ…..

Suddi Sante Desk

ಬೆಂಗಳೂರು –

ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಮತ್ತಷ್ಟು ಕಠಿಣ ಕ್ರಮ ರಾಜ್ಯ ಸರ್ಕಾರ ಜಾರಿಗೆ ತಗೆದುಕೊಂಡು ಬಂದಿದೆ.ಹೌದು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.‌

ಹೌದು ಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಐವರಿಗಿಂತ ಹೆಚ್ಚು ಸೇರುವಂತಿಲ್ಲ. ಇನ್ನು ಕೊರೋ ನಾ ಅಲ್ಲದೇ ಬೇರೆ ಕಾರಣಗಳಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಯಲ್ಲಿ 20 ಜನರೂ ಸೇರುವಂತಿಲ್ಲ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಮಂಜು ನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ

ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೋ ನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸ ಲು ಅವಕಾಶ ನೀಡಿತ್ತು.ಆದ್ರೆ, ಇದೀಗ ಇದನ್ನು ಮತ್ತ ಷ್ಟು ಕಡಿಮೆ ಮಾಡಿ ಮಾಡಲಾಗಿದೆ.ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಆದೇಶ ಹೊರಡಿಸಿದ್ದಾರೆ

ಇನ್ನು ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 34,804 ಪಾಸಿಟಿವ್ ಕೇಸ್‌ಗಳು ಪತ್ತೆ ಯಾಗಿವೆ. ಇನ್ನು 143 ಮಂದಿ ಬಲಿಯಾಗಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.