ಶಿಕ್ಷಕರ ವಿಚಾರದಲ್ಲಿ ಮುಖ್ಯಮಂತ್ರಿ ಗೆ ಮತ್ತೊಂದು ಪತ್ರ ಬರೆದ ಸಭಾಪತಿ ಬಸವರಾಜ ಹೊರಟ್ಟಿ

Suddi Sante Desk

ಹುಬ್ಬಳ್ಳಿ –

ಶಿಕ್ಷಕರ ವಿಚಾರದಲ್ಲಿ ಮಾಜಿ ಶಿಕ್ಷಣ ಸಚಿವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯ ಮಂತ್ರಿ ಗೆ ಪತ್ರ ಬರೆದಿದ್ದಾರೆ.ಹೌದು ‌ರಾಜ್ಯದ ಪ್ರಾಥಮಿಕ,ಪ್ರೌಢ ಶಾಲಾ ಶಿಕ್ಷಕರಿಗೆ ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಯಾವುದೇ ವಯೋಮಿತಿಯ ನಿರ್ಬಂಧ ಹೇರದೆ ಕೋವಿಡ್‌ ನಿರೋಧಕ ಲಸಿಕೆ ನೀಡಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

‘ರಾಜ್ಯ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಈ ಕುರಿತು ನನಗೆ ಮನವಿ ಮಾಡಿಕೊಂಡಿದ್ದಾರೆ‌‌‌.ಹೀಗಾಗಿ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು.ಜುಲೈ 1ರಿಂದ ಶಾಲೆಗಳು ಪುನರಾರಂಭವಾಗುತ್ತವೆ ಎಂದು ಶಿಕ್ಷಣ ಸಚಿವರು ಹೇಳುತ್ತಿದ್ದಾರೆ.ಆದ್ದರಿಂದ ತುರ್ತಾಗಿ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು.ಲಸಿಕೆ ಇಲ್ಲದ ಕಾರಣಕ್ಕೆ ಅನೇಕ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆಂದರು

ಇನ್ನೂ ಪ್ರಮುಖವಾಗಿ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸ ಕರಿಗೆ ವಿಶೇಷ ಪ್ಯಾಕೇಜ್‌ ನೀಡಿದ ಸರ್ಕಾರದ ಕ್ರಮ ಸ್ವಾಗತಾರ್ಹ.ಆದರೆ ಪ್ಯಾಕೇಜ್‌ ಪ್ರಮಾಣ ಕಡಿಮೆ ಯಾಗಿದ್ದು ಇನ್ನೂ ಹೆಚ್ಚಿನ ನೆರವು ನೀಡಬೇಕು. ಕೋವಿಡ್‌ ಕರ್ತವ್ಯದಲ್ಲಿದ್ದಾಗ ಶಿಕ್ಷಕರು ಮೃತಪಟ್ಟರೆ ಅವರ ಕುಟುಂಬದ ಅವಲಂಬಿತರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.