ಯಲ್ಲಾಪುರ –
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ ಹುಬ್ಬಳ್ಳಿ ಕಿಮ್ಸ್ ನ ಮೆಡಿಕಲ್ ವಿದ್ಯಾರ್ಥಿಗಳು ತೀವ್ರವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿಯಿಂದ ಉತ್ತರಕನ್ನಡ ಹಾಗೂ ಗೋವಾ ಪ್ರವಾಸಕ್ಕೆ ಈ ವಿದ್ಯಾರ್ಥಿಗಳು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತವಾಗಿದೆ. ಬೊಲೆರೋ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಕಾರು ಚಾಲಕ ಹಾಗೂ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಯಲ್ಲಾಪುರ ಪೊಲೀಸರು ತಿಳಿಸಿದ್ದಾರೆ.