ಹುಬ್ಬಳ್ಳಿ –
ಹುಬ್ಬಳ್ಳಿಯ ನಗರದ ಚೆನ್ನಮ್ಮ ಸರ್ಕಲ್ ಬಳಿ
ಫ್ಲೈ ಓವರ ನಿರ್ಮಾಣಕ್ಕೆ ಅವಶ್ಯವಿರುವ ಹಣಕಾಸಿನ ಕೊರತೆ ನೀಗಿಸಲು ನವನಗರದ ಪಾಲಿಕೆಯ ಆಸ್ತಿಯನ್ನು ಹರಾಜು ಮಾಡುತ್ತಿದ್ದಾರೆಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದವರು ಪ್ರತಿಭಟನೆ ಮಾಡಿದರು .

ನವನಗರದ ಪಾಲಿಕೆಯ ಆಸ್ತಿಯನ್ನು ಮಾರಾಟ ಮಾಡುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನವನಗರದ ಪಾಲಿಕೆಯ ಕಛೇರಿ ಎದುರುಗಡೆ ಪ್ರತಿಭಟನೆ ಮಾಡಿದರು.
ಮೊದಲೇ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿನ ಬಿ ಆರ್ ಟಿಎಸ್ ಯೋಜನೆ ಅವೈಜ್ಞಾನಿಕ ವಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಈಗ ಮತ್ತೆ ಕೋಟ್ಯಾಂತರ ರೂಪಾಯಿ ವ್ಯಯ ಮಾಡಿ ಪ್ಲೈಒವರ್ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮಾರಾಟ ಸರಿಯಾದ ಕ್ರಮವಲ್ಲ ಎಂದರು

ಆರೋಪಿಸಿ ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ದೀಪಾ ಗೌರಿ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ, ಜಯಲಕ್ಷ್ಮಿ, ರಫೀಕ್ ಸೇರಿದಂತೆ ಅನೇಕ ಕಾರ್ಯಕರ್ತರು ಈ ಒಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.