ಬೆಂಗಳೂರು –
ಈಗಾಗಲೇ ಕೆಲ ವರ್ಗಗಳನ್ನು ಪೂರ್ಣ ಪ್ರಮಾಣ ದಲ್ಲಿ ಆರಂಭ ಮಾಡಿದ ಬೆನ್ನಲ್ಲೇ ಈಗ ಫೆಬ್ರವರಿ 8 ರಿಂದ 5 ರಿಂದ 8 ನೇ ತರಗತಿಗಳನ್ನು ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಫೆಬ್ರವರಿ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆ ಗಳಲ್ಲಿ ತರಗತಿಗಳನ್ನು ಆರಂಭಿಸಬೇಕು ಎಂದು ಹೇಳಲಾಗಿದೆ. ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಂದನೇ ತರಗತಿಯಿಂದಲೇ ಶಾಲೆಗಳನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿಯೂ ಐದರಿಂದ 8ನೇ ತರಗತಿಗಳಿಗೆ ವಿದ್ಯಾಗಮ ಕಲಿಕೆ ನಡೆಯುತ್ತಿದ್ದು, ಭೌತಿಕ ತರಗತಿಗಳನ್ನು ಕೂಡ ಆರಂಭಿಸುವಂತೆ ಸಲಹೆ ನೀಡಿದ್ದಾರೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ ರೊಂದಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಭೆ ನಡೆಸಲಿದ್ದು ಈ ಹಿನ್ನೆಲೆಯಲ್ಲಿ 5 ರಿಂದ 8ನೇ ತರಗತಿಗಳನ್ನು ಆರಂಭಿಸಲು ಸಲಹೆ ನೀಡಲಾಗಿದೆ ಇವೆಲ್ಲದರ ನಡುವೆ ಸರ್ಕಾರ ಶಿಕ್ಷಣ ಸಚಿವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು.
