ಬೆಂಗಳೂರು –
ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಆಡಳಿತರೂಢ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಚುನಾವಣಾ ಸಿದ್ಧತೆಗೆ ಮುಂದಾಗಿದೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಂಸದ ಭಗವಂತ ಖೂಬಾ, ಮುಖಂಡರಾದ ಮಾಲೀಕಯ್ಯ ಗುತ್ತೇದಾರ್, ರಾಜಕುಮಾರ ಪಾಟೀಲ್ ತೇಲ್ಕೂರ್, ಈಶ್ವರ್ ಸಿಂಗ್ ಠಾಕೂರ್, ಅಮರನಾಥ ಪಾಟೀಲ್ ರನ್ನು ನೇಮಕ ಮಾಡಲಾಗಿದೆ.

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜುಗೌಡ, ನೇಮಿರಾಜ್ ನಾಯಕ್ ಹಾಗೂ ಡಾ.ಶಿವರಾಜ್ ಪಾಟೀಲ್‍ರನ್ನು ನೇಮಕ ಮಾಡಲಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವ ಜಗದೀಶ್ ಶೆಟ್ಟರ್, ಮಹೇಶ್ ಟೆಂಗಿನಕಾಯಿ, ಸಚಿವರಾದ ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ ಹಾಗೂ ಬಸವರಾಜ್ ಯಂಕಂಚಿ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.