ಬೆಂಗಳೂರು –
ಕೊನೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಇನ್ನೇನು ಸಮುದಾಯದ ಪಾದಯಾತ್ರೆ ಬೆಂಗಳೂರು ಗೆ ಬರುತ್ತದೆ ಎನ್ನುವಷ್ಟರಲ್ಲಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟುಕೊಂಡು 2 ಎ ಮೀಸಲಾತಿ ಸೇರಿಸುವ ವಿಚಾರದಲ್ಲಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಆಯೋಗಕ್ಕೆ ಪತ್ರ ಬರೆದಿದ್ದಾರೆ .ಪತ್ರ ಬರೆದು ಈ ಬಗ್ಗೆ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಸಧ್ಯ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಒಂದು ಕಡೆ ಸಮಾಜದ ಮುಖಂಡರು ಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರಮಾಣದಲ್ಲಿ ಪಾದಯಾತ್ರೆ ಮಾಡತಾ ಇದ್ದಾರೆ. ಕೂಡಲ ಸಂಗಮದಿಂದ ಆರಂಭಗೊಂಡ ಪಾದಯಾತ್ರೆ ಈಗಾಗಲೇ ಬೆಂಗಳೂರು ಸಮೀಪಿಸಿದೆ. ಇನ್ನೂ ಸ್ಪಂದಿಸದಿದ್ದರೆ ವಿಧಾನ ಸೌಧ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ನೀಡಿದ್ದರು. ಇವೆಲ್ಲದರ ನಡುವೆ ಈಗ ಮುಖ್ಯಮಂತ್ರಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಪತ್ರ ಬರೆದು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ರಾಜ್ಯದ ಸಿಎಂ ಆಗಿ ಎಲ್ಲಾ ಸಮುದಾಯಗಳ ಒಳಿತಿಗೆ ಬದ್ದನಾಗಿರುತ್ತೇನೆ., ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.