ಬಾಗಲಕೋಟ –
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾಗಿದ್ದ ನೂತನ ಸದಸ್ಯರೊಬ್ಬರು ತಾವು ಪಾಲ್ಗೊಂಡಿದ್ದ ಮೊದಲ ಸಾಮಾನ್ಯ ಸಭೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.ಹುನಗುಂದ ತಾಲೂಕಿನ ಅಮರಾವತಿ ಗ್ರಾಮ ಪಂಚಾಯಿತಿ ಸದಸ್ಯ 46 ವರ್ಷದ ಬಾಲಪ್ಪ ಚೌಡಪ್ಪ ಚಲವಾದಿ ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ರಾಮವಾಡಗಿ ಗ್ರಾಮವನ್ನು ಪ್ರತಿನಿಧಿಸಿದ್ದರು.
ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಅವರು, ತಾವು ಪ್ರತಿನಿಧಿಸಿದ್ದ ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದರು. ಈ ವೇಳೆ ಎದೆ ನೋವಿನಿಂದ ಏಕಾಏಕಿ ಅವರು ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಇಳಕಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.