ಬೆಂಗಳೂರು –
ರಾಜ್ಯ ಸರ್ಕಾರದಿಂದ ಇಂದು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಇಂದು ಒಂದೇ ದಿನ ದಾಖಲೆಯ ರೂಪದಲ್ಲಿ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದೆ.ವರ್ಗಾವಣೆಗೊಂಡ 42 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಹೀಗಿದೆ

ಈ ಕುರಿತಂತೆ ವರ್ಗಾವಣೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆಯವರನ್ನು ಎತ್ತಂಗಡಿ ಮಾಡಿ, ಅವರ ಸ್ಥಾನಕ್ಕೆ ಡಾ.ಕೆ.ವಿ.ತ್ರಿಲೋಕ ಚಂದ್ರ ಅವರನ್ನು ನೇಮಕ ಮಾಡಲಾಗಿದೆ.





ಬಿಬಿಎಂಪಿ ವಿಶೇಷ ಕಮೀಷನರ್ ಮಂಜುನಾಥ್ ಅವರನ್ನು ಕೂಡ ವರ್ಗಾವಣೆ ಮಾಡಿದ್ದು, ಅವರನ್ನು ಬೆಂಗಳೂರು ನಗರ ಜಿಲ್ಲೆಗಳ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.ಇನ್ನೂ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದೆ.