ರಾಜ್ಯಸಭೆಯ ವಿಪಕ್ಷ ನಾಯಕರಾಗಿ ನೇಮಕಗೊಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಸಕ ಅಬ್ಬಯ್ಯ ಮತ್ತು ಮಾಜಿ ಶಾಸಕ ನಾಗರಾಜ ಛಬ್ಬಿ ಅಭಿನಂದನೆ ಸಲ್ಲಿಸಿದರು.ಬೆಂಗಳೂರಿನ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕರಾದ ಕರ್ನಾಟಕದ ಹೆಮ್ಮೆಯ ಧೀಮಂತ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯ ನೇತಾರರು ಅಭಿವೃದ್ಧಿ ಹರಿಕಾರರೂ, ಮಾರ್ಗದರ್ಶಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಶಾಸಕರಾದ ನಾಗರಾಜ ಛಬ್ಬಿ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿದರು. ಮಾಜಿ ಸಚಿವರಾದ ದಿ. ಶ್ರೀ ಕೆ.ಎಚ್. ರಂಗನಾಥ್ ಅವರ ಅಳಿಯರಾದ ಶ್ರೀ ವಿಜಯಕುಮಾರ್ ಸೇರಿದಂತೆ ಹಲವರು ಇದ್ದರು.