ಶಿಕ್ಷಣ ಸಚಿವ ರಾಗಿ ಧರ್ಮೇಂದ್ರ ಪ್ರಧಾನ್ – ಹೊರಗುಳಿದಿದ್ದ ನಾಯಕನಿಗೆ ಒಲಿದು ಬಂತು ಸಚಿವ ಸ್ಥಾನ…..

Suddi Sante Desk

ನವದೆಹಲಿ –

ಕೇಂದ್ರದ ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ಅಧಿಕಾರ ವಹಿಸಿಕೊಂಡಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದಿಂದ ಹೊರಗುಳಿದಿದ್ದ ಮಾಜಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪಾಲಿಗೆ ಮತ್ತೊಮ್ಮೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ.

ಈ ಹಿಂದೆ ಕೇಂದ್ರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉಕ್ಕಿನ ಖಾತೆ ನಿರ್ವಹಿಸಿದ ಧರ್ಮೇಂದ್ರ ಪ್ರಧಾನ್ ರಿಗೆ ಈ ಬಾರಿ ಶಿಕ್ಷಣ ಖಾತೆಯನ್ನು ನೀಡಲಾಗಿದೆ. ಶಿಕ್ಷಣ ಸಚಿವಾಲಯದ ಜೊತೆಗೆ ಕೌಶಲ್ಯ ಅಭಿವೃದ್ಧಿ ಸಚಿವಾಲಯವನ್ನು ಸೇರಿಸಲಾಗಿದೆ. ಭವಿಷ್ಯದಲ್ಲಿ ಈ ಎರಡು ಸಚಿವಾಲ ಯಗಳು ಒಟ್ಟಾಗಿ ಕಾರ್ಯ ನಿರ್ವಹಿಸಲಿದ್ದು ಎರಡು ಸಚಿವಾಲಯದ ಹೊಣೆಯನ್ನು ಧರ್ಮೇಂದ್ರ ಪ್ರಧಾನ್ ರಿಗೆ ವಹಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.