ಹುಬ್ಬಳ್ಳಿ –
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಖಂಡಿನೆ ವ್ಯಕ್ತವಾಗಿದೆ. ಬೆಲೆ ಏರಿಕೆಯನ್ನು ಖಂಡಿಸಿ ನಗರದಲ್ಲಿ ಶಿವಸೇನಾ ಮತ್ತು ಭೀಮಸೇನಾ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಯಿತು.

ನಗರದ ಸಂಗೋಳ್ಳಿ ರಾಯಣ್ಣ ಮತ್ತು ತಹಶೀಲ್ದಾರ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಲಾಗಿತ್ತು.

ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಶಿವಸೇನಾ ಸಂಘಟನೆಯಿಂದ ಪ್ರತಿಭಟನೆ ಮಾಡಲಾಯಿತು. ಸಿಲಿಂಡರ್ ಹಾಗೂ ಪೆಟ್ರೋಲ್ ಬಾಟಲ್ ಬೀದಿಯಲ್ಲಿಟ್ಟು ಪ್ರತಿಭಟನೆ ಮಾಡಿದ ಶಿವಸೇನೆ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದರು.

ಇನ್ನೂ ಇತ್ತ ತಹಶೀಲ್ದಾರ ಕಚೇರಿ ಮುಂದೆ ಭೀಮಸೇನೆ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ ಸಮಿತಿಯ ಸದಸ್ಯರು ಮುಖಂಡರು ಬೆಲೆ ಏರಿಕೆಯನ್ನು ಖಂಡಿಸಿದರು. ಎರಡು ಸಂಘಟನೆ ಗಳು ಪ್ರತ್ಯೇಕವಾಗಿ ಪ್ರತಿಭಟನೆ ಮಾಡಿ ಬೆಲೆ ಏರಿಕೆಯನ್ನು ಖಂಡಿಸಿದರು.