ಹುಬ್ಬಳ್ಳಿ –
ಪ್ರತಿಷ್ಠಿತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೂತನ ವಾಗಿ ನಿರ್ಮಿಸಿದ 19 ಕೋಟಿ ವೆಚ್ಚದ ಆಡಳಿತ ಭವನ, 2.8 ಕೋಟಿ ವೆಚ್ಚದ ಸ್ಕಿಲ್ ಲ್ಯಾಬ್, 6.88 ಕೋಟಿ ವೆಚ್ಚದ ಸುಸಜ್ಜಿತ ಹೃದ್ರೋಗ ಆಸ್ಪತ್ರೆ, 1.1 ಕೋಟಿ ವೆಚ್ಚದ ಆಧುನಿಕ ಶವಗಾರ, 1 ಕೋಟಿ ವೆಚ್ಚದ ರೆಟಿನಾ ಕ್ಲೀನಕ್ ಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಸಿ ಜಡಿ, ಶಾಸಕರಾದ ಬಸವರಾಜ ಹೊರಟ್ಟಿ,

ಅಬ್ಬಯ್ಯ ಪ್ರಸಾದ್, ಸಿ.ಎಂ. ನಿಂಬಣ್ಣನವರ, ಕುಸುಮಾವತಿ ಶಿವಳ್ಳಿ, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ನಿರ್ದೇಶಕ ಡಾ.ಪಿ.ಗಿರೀಶ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ,

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗ ಅಂಟರತಾನಿ,ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಪ್ರಾಂಶುಪಾಲ ಡಾ.ಎಂ.ಸಿ.ಚಂದ್ರು, ವೈದ್ಯಕೀಯ ಅಧೀಕ್ಷಕ ಡಾ.ರಾಜಶೇಖರ ದ್ಯಾಬೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇನ್ನೂ ಇಂದಿನಿಂದ ಬಹುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಎಲ್ಲವೂ ಬಳಕೆಗೆ ದೊರೆಯಲಿದ್ದು ಸಾರ್ವಜನಿಕರು ಇವುಗಳನ್ನು ಸರಿಯಾಗಿ ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗಣ್ಯರು ವಿನಂತಿ ಮಾಡಿಕೊಂಡರು.