ಅಹ್ಮದ್ ನಗರ –
ಸಾಮಾನ್ಯವಾಗಿ ಯಾವುದೇ ರೀತಿಯ ಚುನಾವಣೆ ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿ ಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕ ಸಂಭ್ರಮಾಚರಣೆ ಮಾಡಿ ಹಾಗೇ ಹೀಗೆ ಅಧಿಕಾರ ವಹಿಸಿಕೊಳ್ಳೊದನ್ನು ನೋಡಿದ್ದೆವೆ ಕೇಳಿದ್ದೇವೆ ಆದರೆ ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್ ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.
ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪ್ರಮಾಣ ವಚನ ಸ್ವೀಕರಿಸಲು ಫೆ.12ರಂದು ಹೆಲಿಕಾಪ್ಟರ್ ನಲ್ಲಿ ಆಗಮಿಸಿದರು. ಉದ್ಯಮಿ ಆಗಿರುವ ಜಲಿಂದರ್ ಗಾಗರೆ (50) ಪುಣೆಯಲ್ಲಿ ಕಂಪನಿಯನ್ನು ಹೊಂದಿದ್ದಾರೆ.
ಹೆಲಿಕಾಪ್ಟರ್ ಅನ್ನು ಬುಕ್ ಮಾಡಿದ ಜಲಿಂದರ್, ಪುಣೆಯಿಂದ ಹಳ್ಳಿಗೆ ತೆರಳಿದ್ದಾರೆ. ಬಳಿಕ 12 ಎತ್ತಿನ ಗಾಡಿಗಳಿಂದ ಗ್ರಾಮ ಪಂಚಾಯಿತಿಗೆ ಮೆರವಣಿಗೆ ಹೋಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮದ ಅಭಿವೃದ್ಧಿಗಾಗಿ ಚುನಾವಣೆಗೆ ಸ್ಪರ್ಧಿಸಿದ್ದಾಗಿ ತಿಳಿಸಿದರು.