ತಂದೆ -ತಾಯಿ ಅವರ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…..

Suddi Sante Desk

ಹುಬ್ಬಳ್ಳಿ –

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಇರುವ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ಮಾಜಿ ಮುಖ್ಯ ಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿ ಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.

ತಂದೆ,ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲ ನಿಮಿಷ ಮೌನವಾಗಿ ಸ್ಮರಣೆ ಮಾಡಿದರು.ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.ಇದೇ ವೇಳೆ ಮಾತನಾಡಿದ ಅವರು ಪ್ರತಿಕ್ರಿಯಿಸಿ ತಂದೆ ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದರು.

ಇವರೊಂದಿಗೆ ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ ,ಶಾಸಕ ಶಿವರಾಮ್ ಹೆಬ್ಬಾರ ,ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರ ಶೆಟ್ಟಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾ ರ್ಜುನ ಹೊರಕೇರಿ ಸೇರಿದಂತೆ ,ಕುಟುಂಬದ ಬಂಧುಗಳು,ರಾಜಕೀಯ ಪಕ್ಷಗಳ ಮುಖಂಡರು, ಅಭಿಮಾನಿಗಳು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.