ಕೋಲಾರ –
ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಡ್ಯಾನ್ಸ್ ಮಾಡುತ್ತಾ ಮೋಜು ಮಸ್ತಿ ಮಾಡಿದ ಘಟನೆ ಕೋಲಾರ ದಲ್ಲಿ ನಡೆದಿದೆ.

ಕೋಲಾರದಲ್ಲಿ ಗ್ರಾಮ ವಾಸ್ತವ್ಯವನ್ನು ಮೋಜು ಮಸ್ತಿಗೆ ಬಳಸಿಕೊಂಡಿದ್ದಾರೆ ಅಧಿಕಾರಿಗಳು. ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ತಹಶೀಲ್ದಾರ್ ಸಖತ್ ಡ್ಯಾನ್ಸ್ ಮಾಡಿದ್ದಾರೆ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನರಿನತ್ತ ಗ್ರಾಮದಲ್ಲಿ ಗ್ರಾಮ ವಾಸ್ತವ್ಯವನ್ನು ಹಮ್ಮಿಕೊಳ್ಳ ಲಾಗಿತ್ತು.ಗ್ರಾಮವಾಸ್ತವ್ಯದಲ್ಲಿ ಸಖತ್ ಡ್ಯಾನ್ಸ್ ಮಾಡಿ ಮೋಜು ಮಸ್ತಿ ಮಾಡಿದ್ದಾರೆ ತಹಶೀಲ್ದಾರ್ ಮತ್ತು ಅಧಿಕಾರಿಗಳು ಹೇಗೆ ಕುಣಿದಿದ್ದಾರೆ ಒಮ್ಮೆ ವಿಡಿಯೋ ನೋಡಿ.
ಮಹಿಳಾ ಸಿಬ್ಬಂದಿಯೊಂದಿಗೆ ಹಾಡಿಗೆ ಸಖತ್ ಡಾನ್ಸ್ ಮಾಡಿದ್ದಾರೆ ತಹಶೀಲ್ದಾರ್ ಮತ್ತು ಅಧಿಕಾರಿಗಳು.ಬಂಗಾರಪೇಟೆ ತಹಶೀಲ್ದಾರ್ ದಯಾನಂದ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮುನಿರಾಜ್, ಪಿಡಿಓ ಹಾಗೂ ವಿಎಗಳ ಜೊತೆ ಡಾನ್ಸ್ ಮಾಡಲಾಗಿದೆ.

ತಹಶೀಲ್ದಾರ್ ಹಾಗೂ ಅಧಿಕಾರಿಗಳು ಡಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ತಹಶೀಲ್ದಾರ್ ಹಾಗೂ ಅಧಿಕಾರಿಗಳು ವಿರುದ್ಧ ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.ಅದೂ ಮಹಿಳಾ ಸಿಬ್ಬಂದಿ ಗಳೊಂದಿಗೆ ಹೀಗೆ ಡ್ಯಾನ್ಸ್ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದರು.