ಬೆಳಗಾವಿ –
ಕೇರಳ ಮತ್ತು ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿದ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗಗಳ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿಯ ದರ್ಶನವನ್ನು ಸಾರ್ವಜನಿಕರ ದರ್ಶನಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜಿಲ್ಲೆಯ ಪ್ರಮುಖ ದೇವಾಲಯಗಳ ಪ್ರವೇಶಕ್ಕೂ ನಿರ್ಬಂಧ ವಿಧಿಸಿದ್ದಾರೆ.

ದೇಶದಲ್ಲಿ ಮತ್ತೊಂದು ಕೊರೋನಾ ಅಲೆ ಸ್ಫೋಟಗೊಂಡಿದೆ.ಇದರಿಂದಾಗಿ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ಕೂಡ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ, ಪ್ರಯಾಣಿಕರಿಗೆ ಹೊಸ ಗೈಡ್ ಲೈನ್ಸ್ ಕೂಡ ಪ್ರಕಟಿಸಿದೆ.

ಒಟ್ಟಾರೆ ಏನೇ ಆಗಲಿ ಈಗಷ್ಟೇ ಬಾಗಿಲು ತೆರೆದಿದ್ದ ದೇವಿಯ ದೇವಾಲಯ ಮತ್ತೆ ಬಂದ್ ಆಗಿದೆ.