ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು ಪ್ರಕರಣ ತನಿಖೆಗೆ ಸೂಚಿಸಿದ ಶಿಕ್ಷಣ ಸಚಿವ

Suddi Sante Desk

ಬೆಂಗಳೂರು –

ತುಮಕೂರು ಜಿಲ್ಲೆಯ ಕರೀಕೆರೆಯ ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವಿಗೀ ಡಾದ ಪ್ರಕರಣವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗಂಭೀರವಾಗಿ ಪರಿಗಣಿಸಿದ್ದಾರೆ.ಹೌದು ಧ್ವಜಾರೋ ಹಣ ಕಂಬವನ್ನು ನೆಡುವಾಗ ಆ ಒಂದು ಕಂಬಕ್ಕೆ ವಿದ್ಯುತ್ ತಗುಲಿ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದು ಪವನ್ ಮತ್ತು ಶಶಾಂಕ್ ಎಂಬ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು ಈ ಒಂದು ಪ್ರಕರಣವನ್ನು ತನಿಖೆ ಮಾಡುವಂತೆ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ವಿದ್ಯಾರ್ಥಿ ಸಾವಿನ ಸುದ್ದಿ ತಿಳಿದು ಆಘಾತವಾಯಿತು.ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ.ಗಾಯಗೊಂಡ ವಿದ್ಯಾರ್ಥಿ ಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯ ಗಳನ್ನು ಒದಗಿಸುವಂತೆ ತಿಳಿಸಿರುವುದಾಗಿ ಹೇಳಿದರು

ಈ ಘಟನೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸಿರುವು ದಾಗಿ ಸಚಿವರು ಹೇಳಿದರು

ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನನ್ನ ತೀವ್ರ ಸಂತಾಪ ಗಳನ್ನು ತಿಳಿಸಲು ಬಯಸುತ್ತೇನೆ. ಅವರ ದುಃಖ ಶಬ್ದಗಳಿಂದ ಶಮನ ಮಾಡಲು ಸಾಧ್ಯವಿಲ್ಲ. ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯ ಒದಗಿಸುವಂತೆ ತಿಳಿಸಿದ್ದೇನೆ. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸುತ್ತೇನೆ ಎಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.