ಹುಬ್ಬಳ್ಳಿ ಧಾರವಾಡ –
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮಂಡಳಿ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗೆ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.
ಹೆಸ್ಕಾಂ ಗೆ ಸುನೀಲ್ ಸರೂರ ರನ್ನು ಹಾಗೇ NWKRTC ಗೆ ಬಿಜೆಪಿ ಹಿರಿಯ ಮುಖಂಡ ಪ್ರಕಾಶ ಗೋಡಬೊಲೆ ಅವರನ್ನು ನೇಮಕ ಮಾಡಿ ಆದೇಶವನ್ನು ಮಾಡಲಾಗಿದೆ.
ಎರಡು ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಧಾರವಾಡದ ಇಬ್ಬರನ್ನೂ ನೇಮಕ ಮಾಡಲಾಗಿದ್ದು ಇದರಿಂದ ಸಂಸ್ಥೆಯ ನಿರ್ದೇಶಕರಾಗಿ ನಿಯುಕ್ತರಾದ ಸುಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಶ್ರೀ ಅಮೃತ ದೇಸಾಯಿ ಹಾಗೂ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಅಭಿಮಾನಿಗಳು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿ ಶುಭಕೋರಿದರು.