ದಾವಣಗೆರೆ –
ಹತ್ತು ವರ್ಷಗಳ ಹಿಂದೆ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ ಈಗ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನವಿಲೇಹಾಳ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ತಿಪ್ಪೇಸ್ವಾಮಿ ಎರಡು ವರ್ಷ ಜೈಲು ಶಿಕ್ಷೆಗೊಳಗಾಗಿದ್ದು, ಜೊತೆಗೆ 20000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಹತ್ತು ವರ್ಷಗಳ ಹಿಂದೆ ತಿಪ್ಪೇಸ್ವಾಮಿ ಲಂಚ ಪಡೆದಿದ್ದು, ಈ ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ. ಗೀತಾ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.