ಧಾರವಾಡ –
BRTS ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ.ನಗರದ ಕೋರ್ಟ್ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ.
ಧಾರವಾಡ ಕಡೆಯಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ ಕ್ರಿಟಾ ಕಾರು ಬಿಆರ್ ಟಿಎಸ್ ರಸ್ತೆ ದಾಟುವಾಗ ಈ ಒಂದು ಘಟನೆ ನಡೆದಿದೆ.
ರಸ್ತೆಯಲ್ಲಿ ಹೋಗುವಾಗ ಎದುರಿಗೆ ಬಂದ ವಾಹನವನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ.
ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಕಾರಿನ ಮುಂದಿನ ಚಕ್ರ ಸಂಪೂರ್ಣವಾಗಿ ಕಟ್ ಆಗಿದ್ದು ವಿದ್ಯುತ್ ಕಂಬ ವಾಲಿದೆ. ಇನ್ನೂ ವಿಷಯ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.