ಸಚಿವ ಸ್ಥಾನದ ರಾಜೀನಾಮೆ ಬೆನ್ನಲ್ಲೇ ಹೆಚ್ ನಾಗೇಶ್ ಗೆ ದೊಡ್ಡ ಹುದ್ದೆ

Suddi Sante Desk

ಬೆಂಗಳೂರು –

ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೆಚ್ ನಾಗೇಶ್ ಅವರಿಗೆ ದೊಡ್ಡ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಸಚಿವ ಸಂಪುಟ ವಿಸ್ತರಣೆಗಾಗಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಎಂ ಸೂಚನೆಯಂತೆ ರಾಜೀನಾಮೆ ನೀಡಿದ್ದ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದೊಂದಿಗೆ ಸಂಪುಟ ದರ್ಜೆ ಸ್ಥಾನ ಕಲ್ಪಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.