ಧಾರವಾಡ –
ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧ ಮಾಡಿದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಗರಗ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗರಗ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ವಾರ್ಡ್ ನಂಬರ 2 ರಲ್ಲಿ ಸ್ಪರ್ಧೆ ಮಾಡಿದ್ದ ದಾಮೋದರ ಯಲಿಗಾರ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಯಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ ಗ್ರಾಮ ಪಂಚಾಯತಗೆ ಮೊದಲನೇಯ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು ಗರಗ ಗ್ರಾಮ ಪಂಚಾಯತಗೂ ಕೂಡಾ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಮತದಾನ ನಡೆಯುತ್ತಿದೆ. ಈಗಾಗಲೇ ನಾಮಪತ್ರ ಸಲ್ಲಿಸಿ ಅಬ್ಬರದ ಪ್ರಚಾರ ಮಾಡಿ ಇಂದು ಮತದಾನ ಕೇಂದ್ರದ ಬಳಿ ನಿಂತುಕೊಂಡ ಎಲ್ಲಾ ಪ್ರಕ್ರಿಯೇಗಳನ್ನು ಮಾಡಬೇಕಾಗಿದ್ದ ದಾಮೋದರ ಯಲಿಗಾರ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಗರಗ ಗ್ರಾಮದಲ್ಲಿನ ಮನೆಯಲ್ಲಿನ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೂ ವಿಷಯ ತಿಳಿದ ಗರಗ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿದರು. ಇನ್ನೂ ಇತ್ತ ಆತ್ಮಹತ್ಯೆಗೆ ಕಾರಣವನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಹದಿನೈದು ದಿನಗಳಲ್ಲಿ ಪತ್ನಿಯ ಹೆರಿಗೆ ಇತ್ತು ಇವೆಲ್ಲದರ ನಡುವೆ ದಾಮೋದರ ಯಾತಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕುರಿತಂತೆ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ. ಇನ್ನೂ ಇವೆಲ್ಲದರ ನಡುವೆ ದಾಮೋದರ ಆತ್ಮಹತ್ಯೆಗೆ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.