ಕಾರು ಕ್ಯಾಂಟೈನರ್ ಡಿಕ್ಕಿ – ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

Suddi Sante Desk

ಯಲ್ಲಾಪುರ –

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ ಹುಬ್ಬಳ್ಳಿ ಕಿಮ್ಸ್ ನ ಮೆಡಿಕಲ್ ವಿದ್ಯಾರ್ಥಿಗಳು ತೀವ್ರವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿಯಿಂದ ಉತ್ತರಕನ್ನಡ ಹಾಗೂ ಗೋವಾ ಪ್ರವಾಸಕ್ಕೆ ಈ ವಿದ್ಯಾರ್ಥಿಗಳು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತವಾಗಿದೆ. ಬೊಲೆರೋ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಕಾರು ಚಾಲಕ ಹಾಗೂ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಯಲ್ಲಾಪುರ ಪೊಲೀಸರು ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.