ಮೈಸೂರು –
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಮೂವರು ಯುವಕರು ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿ ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.

ಸುರೇಶ್(26), ಕಿರಣ್ (25) ಸ್ಥಳದಲ್ಲೇ ಸಾವಿಗೀಡಾ ದರೆ ಇನ್ನೂ ಮತ್ತೊಬ್ಬ ಯುವಕ ಅಜಯ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರುಎಳೆದರು

ನರಸೀಪುರ ತಾಲ್ಲೂಕಿನ ಹಸುವಟ್ಟಿ ನಿವಾಸಿಗಳಾಗಿ ದ್ದಾರೆ.ಇನ್ನೂ ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ