ಉಡುಪಿ –
ಬಸ್ ಗಾಗಿ ಕಾಯುತ್ತಿದ್ದವರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಉಡುಪಿಯಲ್ಲಿ ನಡೆದಿದೆ. ಕಾಪು ತಾಲೂಕು ಎರ್ಮಾಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಘಟನೆ ನಡೆದಿದೆ.
ರಸ್ತೆ ಪಕ್ಕದಲ್ಲಿ ಬಸ್ ಗಾಗಿ ಇಬ್ಬರು ಕಾಯುತ್ತಾ ನಿಂತುಕೊಂಡಿದ್ದರು. ವೇಗವಾಗಿ ಬಂದ ಬಂದ ಕಾರೊಂದು ಇಬ್ಬರಿಗೆ ಡಿಕ್ಕಿಯಾಗಿದೆ. ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ. ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಸಾವಿಗೀಡಾದ ಇಬ್ಬರು ದುರ್ದೈವಿಗಳಾಗಿದ್ದಾರೆ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಅಲ್ಟೋ ಕಾರು ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಈ ಇಬ್ಬರು ಬಸ್ಸಿಗಾಗಿ ಕಾಯುತ್ತಿದ್ದರು.
ಪ್ರಯಾಣಿಕರು ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆಸೆಯಲ್ಪ ಎಲ್ಲೆಂದರಲ್ಲಿ ಬಿದ್ದಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.