ಹೊಸಕೋಟೆ –
ಶಾಸಕ ಶರತ್ ಬಚ್ಚೇಗೌಡ ಸೇರಿ 15 ಜನರ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಇತ್ತೀಚಿಗೆ ನಗರದಲ್ಲಿ ಸಚಿವ ಎಂಟಿಬಿ ನಾಗರಾಜ್ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿ ಗಳ ಗುದ್ದಲಿ ಪೂಜೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ ಮಾಡಿದ್ದ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಗದ್ದಲ ನಡೆಸಿದ್ದರು.

ಈ ವೇಳೆ ಪೊಲೀಸರು ಮತ್ತು ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.

ಹೀಗಾಗಿ ಶರತ್ ಬಚ್ಚೇಗೌಡ ಬೆಂಬಲಿಗರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದ ಹಿನ್ನೆಲೆಯಲ್ಲಿ ಶಾಸಕರು ಸೇರಿದಂತೆ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸಧ್ಯ ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ