This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಪ್ರಾಥಮಿಕ ಶಾಲಾ ಆರಂಭದ ಭವಿಷ್ಯ ಸೆಪ್ಟೆಂಬರ್ 30 ರಂದು ನಿರ್ಧಾರ – ಏನಾಗಲಿದೆ ಏನೋ

WhatsApp Group Join Now
Telegram Group Join Now

ಹುಬ್ಬಳ್ಳಿ –

ಒಂದರಿಂದ 8ನೆ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆಗಸ್ಟ್ 30ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಆಗಸ್ಟ್ 23 ರಿಂದ 9ರಿಂದ 12ನೆ ತರಗತಿ ಗಳನ್ನು ಆರಂಭಿಸಲಾಗಿದ್ದು ಅದರ ಸಾಧಕ- ಬಾಧಕ ಗಳನ್ನು ಅವಲೋಕಿಸಿ 1ರಿಂದ 8ನೆ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದರು.

ಉನ್ನತ ಮಟ್ಟದ ತಜ್ಞರ ಸಮಿತಿಯ ಡಾ. ದೇವಿಪ್ರ ಸಾದ್ ಶೆಟ್ಟಿ ಅವರು 6 ರಿಂದ 8ನೆ ತರಗತಿ ಆರಂಭಿ ಸಬಹುದೆಂದು ಸಲಹೆ ನೀಡಿದ್ದಾರೆ. ಜತೆಗೆ ಕಳೆದ ನಾಲ್ಕು ದಿನಗಳಿಂದ ಆರಂಭವಾದ ಶಾಲೆಗಳ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಸ್ಪಂದನೆ ಕಂಡುಬಂದಿದೆ ಇದರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಆಲೋಚನೆ ವ್ಯಕ್ತವಾಗುತ್ತಿದೆ. ಆದರೆತಾಂತ್ರಿಕ ಸಮಿತಿಯ ವರದಿ ಮೇಲೆ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಈ ಆಧಾರದ ಮೇಲೆ ಶಾಲೆಗಳನ್ನು ಕೋವಿಡ್ ನಿಯ ಮಾವಳಿಗಳನ್ನು ಅನುಸರಿಸಿ ಆರಂಭಿಸಲಾಗುವುದು ಅಕಸ್ಮಾತ್ ಮೂರನೆ ಅಲೆ ವ್ಯಾಪಿಸಿದರೆ ಶಾಲೆಗ ಳನ್ನು ಬಂದ್ ಮಾಡುವ ಕುರಿತು ನಿರ್ಣಯ ಕೈಗೊ ಳ್ಳಲಾಗುವುದು ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗು ವಂತೆ ಶಿಕ್ಷಕರ ವರ್ಗಾವಣೆ ನಡೆಸಲಾಗುತ್ತಿದೆ.ಸೆ.5 ರಿಂದ ಕೌನ್ಸಲಿಂಗ್ ಆರಂಭವಾಗಲಿದ್ದು ಆ ಸಂದರ್ಭ ದಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಶೀಲಿಸಿ ಸರಿಪಡಿಸಲಾಗುವುದು ಇದರಿಂದ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಗೆ ಅನುಕೂಲ ಎಂದರು.


Google News

 

 

WhatsApp Group Join Now
Telegram Group Join Now
Suddi Sante Desk