ಬೆಂಗಳೂರು –
7ನೇ ವೇತನ ಆಯೋಗ ಅನುಷ್ಠಾನ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆ ಗಳ ಈಡೇರಿಕೆಗೆ ಒತ್ತಾಯಿಸಿ ಈಗಾಗಲೇ ಹೋರಾಟಕ್ಕೆ ರಾಜ್ಯದ ಸರ್ಕಾರಿ ನೌಕರರು ಕರೆ ನೀಡಿದ್ದು ಈ ಒಂದು ಹೋರಾಟಕ್ಕೆ ರಾಜ್ಯ ಸರ್ಕಾರ ಭಯಗೊಂಡಂತೆ ಕಾಣುತ್ತಿದ್ದು ಈ ಒಂದು ನಡುವೆ ತುರ್ತು ಸಚಿವ ಸಂಪುಟದ ಸಭೆ ಯನ್ನು ಕರೆಯಲಾಗಿದೆ.
ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಇಂದು ಸಿಹಿಸುದ್ದಿ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳ ನಡುವೆ ರಾಜ್ಯ ಸರಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಜು.15 ರ ಇಂದು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ.
ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು ಸಂಪುಟ ಕಾರ್ಯಸೂಚಿಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ವಿಷಯ ಸೇರ್ಪಡೆಯಾಗಿದೆ. ಬೇಡಿಕೆಗಾಗಿ ಮಾಸಾಂತ್ಯದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ಎಚ್ಚರಿಕೆಯನ್ನು ನೌಕರ ಸಂಘಟನೆಗಳು ನೀಡಿದ್ದವು.
ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರದಲ್ಲಿ ನಿರ್ಧಾರ ಹೊರಬೀ ಳುವ ಸಾಧ್ಯತೆ ಇದೆ ಎನ್ನಲಾಗಿದೆ.7ನೇ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು,
ಇನ್ನು ಗರಿಷ್ಠ ಶೇ.10.5 ವೇತನ ಹೆಚ್ಚಳ ಆಗಬೇ ಕಿದೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸಿ ನಂತೆ ರಾಜ್ಯ ಸರ್ಕಾರಿ ನೌಕರರಿಗೆ ಅಂತಿಮವಾಗಿ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿ ಸಲಾಗಿದ್ದು, ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು ನೌಕರರ ಮೂರು ಪ್ರಮುಖ ಬೇಡಿಕೆಗಳ ಕುರಿತು ಭವಿಷ್ಯ ನಿರ್ಧಾರ ವಾಗಲಿದ್ದು ಏನೇನಾಗಲಿದೆ ಎಂಬುದನ್ನೂ ಕೂಡ ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..